ಉಚಿತ ಗ್ಯಾಸ್ ಸಿಲಿಂಡರ್ ಹಾಗೂ ಸ್ಟವ್ ಪಡೆಯಲು ಸರ್ಕಾರದಿಂದ ಅರ್ಜಿ ಆಹ್ವಾನ! ಈಗಲೇ ಅರ್ಜಿ ಸಲ್ಲಿಸಿ! Free Gas Cylinder Scheme
ನಮಸ್ಕಾರ ರಾಜ್ಯದ ಜನತೆಗೆಲ್ಲರಿಗೂ, ಈ ಲೇಖನದ ಮೂಲಕ ಎಲ್ಲಾ ಜನರಿಗೆ ತಿಳಿಸುವ ವಿಷಯವೇನೆಂದರೆ, ಉಚಿತವಾಗಿ ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಿ, ಗ್ಯಾಸ್ ಸಿಲಿಂಡರನ್ನು ಹಾಗೂ ಉಚಿತವಾಗಿ ಸ್ಟವ್ ಅನ್ನು ಯಾವ ರೀತಿ ಪಡೆದುಕೊಳ್ಳಬೇಕೆಂಬುದನ್ನು ಈ ಲೇಖನದಲ್ಲಿ ನೀಡಲಾಗಿರುತ್ತದೆ.
ಈ ಪ್ರಧಾನಮಂತ್ರಿ ಉಜ್ವಲ ಯೋಜನೆ 2.0 ಈ ಯೋಜನೆಗೆ ಅರ್ಜಿ ಸಲ್ಲಿಸಿದರೆ, ಉಚಿತವಾಗಿ ಈ ಯೋಜನೆಯ ಅಡಿಯಲ್ಲಿ ಗ್ಯಾಸ್ ಸಿಲಿಂಡರ್ ಆಗೋ ಸ್ಟವ್ ಅನ್ನು ನೀಡಲಾಗುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾವೆಲ್ಲ ಅರ್ಹತೆಗಳಿರಬೇಕು? ಮತ್ತು ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳು ಬೇಕಾಗುತ್ತವೆ ಎಂಬುದನ್ನು ಈ ಲೇಖನದಲ್ಲಿ ತಿಳಿದುಕೊಳ್ಳಿ.
ಅರ್ಜಿ ಸಲ್ಲಿಸಲು ಅರ್ಹರು ಯಾರು:
- ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು 18 ವರ್ಷ ಮೇಲ್ಪಟ್ಟಿರಬೇಕು.
- ಈ ಯೋಜನೆಗೆ ಮಹಿಳೆಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿರುತ್ತದೆ.
- ಈ ಮೊದಲು ಅರ್ಜಿದಾರನ ಕುಟುಂಬದಲ್ಲಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ನ ಬಳಕೆ ಅಥವಾ ಗ್ಯಾಸ್ ಕನೆಕ್ಷನ್ ಹೊಂದಿರಬಾರದು.
- ಬಿಪಿಎಲ್ ರೇಷನ್ ಕಾರ್ಡ್ ಹೊಂದಿದವರು ಅಥವಾ ಹಿಂದುಳಿದ ವರ್ಗಕ್ಕೆ ಸೇರಿದವರು ಮಾತ್ರ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- ಬ್ಯಾಂಕ್ ಪಾಸ್ ಬುಕ್ ವಿವರಗಳು
- ರೇಷನ್ ಕಾರ್ಡ್
- ಅಭ್ಯರ್ಥಿಯ ಆಧಾರ್ ಕಾರ್ಡ್
- ಚಾಲ್ತಿಯಲ್ಲಿರುವ ಮೊಬೈಲ್ ನಂಬರ್
ಅರ್ಜಿ ಸಲ್ಲಿಸುವ ವಿಧಾನ:
ನೀವೇನಾದರೂ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆ ಮತ್ತು ಆಸಕ್ತಿಯನ್ನು ಹೊಂದಿದ್ದರೆ, ನಿಮ್ಮ ಹತ್ತಿರವಿರುವ ಗ್ಯಾಸ್ ಏಜೆನ್ಸಿಯನ್ನು ಭೇಟಿ ನೀಡಿ ಉಚಿತ ಗ್ಯಾಸ್ ಸಿಲಿಂಡರ್ ಹಾಗೂ ಸ್ಟೌವನ್ನು ಪಡೆದುಕೊಳ್ಳಲು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಅಥವಾ ನೀವೇ ನಿಮ್ಮ ಮೊಬೈಲ್ ಮೂಲಕ ಈ ಕೆಳಗಡೆ ನೀಡಿರುವ ಜಾಲತಾಣವನ್ನು ಬಳಸಿಕೊಂಡು ಪ್ರಧಾನಮಂತ್ರಿ ಉಜ್ವಲ ಯೋಜನೆ 2.0 ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.
Application Link | Apply Now |