Labour Card Scholarship: ವಿದ್ಯಾರ್ಥಿಗಳಿಗೆ ಸಿಗಲಿದೆ 11,000 ಸ್ಕಾಲರ್ಶಿಪ್! ಲೇಬರ್ ಕಾರ್ಡ್ ವಿದ್ಯಾರ್ಥಿವೇತನಕ್ಕೆ ಈಗಲೇ ಅರ್ಜಿ ಸಲ್ಲಿಸಿ!
ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ರಾಜ್ಯದ ಜನತೆಗೆ ತಿಳಿಸುವ ವಿಷಯವೆಂದರೆ, ಲೇಬರ್ ಕಾರ್ಡ್ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಹತೆ ಮತ್ತು ಆಸಕ್ತಿ ಇರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ವಿದ್ಯಾರ್ಥಿ ವೇತನದ ಮೊತ್ತವನ್ನು ನೇರವಾಗಿ ವಿದ್ಯಾರ್ಥಿಗಳ ಖಾತೆಗೆ ಪಡೆಯಬಹುದಾಗಿರುತ್ತದೆ.
ಕಟ್ಟಡ ಮತ್ತು ಕಾರ್ಮಿಕ ಮಕ್ಕಳಿಗೆ ಹಾಗೂ ಕೂಲಿ ಕಾರ್ಮಿಕರ ಮಕ್ಕಳಿಗೆ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದ್ದು ಇಂತಹ ವಿದ್ಯಾರ್ಥಿಗಳು ಉನ್ನತವಾದ ಶಿಕ್ಷಣವನ್ನು ಪಡೆಯಲು ಈ ಸಹಾಯಧನವನ್ನು ಆರ್ಥಿಕ ಸಹಾಯಕ್ಕಾಗಿ ನೀಡಲಾಗುತ್ತದೆ. ಈ ಲೇಖನದ ಮೂಲಕ ಲೇಬರ್ ಕಾರ್ಡ್ ವಿದ್ಯಾರ್ಥಿ ವೇತನಕ್ಕೆ ಯಾವ ರೀತಿ ಅರ್ಜಿ ಸಲ್ಲಿಸಬೇಕೆಂಬುದನ್ನು ತಿಳಿದುಕೊಳ್ಳಿ.
ಲೇಬರ್ ಕಾರ್ಡ್ ವಿದ್ಯಾರ್ಥಿ ವೇತನ (Labour Card Scholarship)
ನೀವೇನಾದರೂ ಕಟ್ಟಡ ಕಾರ್ಮಿಕ ಮಕ್ಕಳಾಗಿದ್ದಲ್ಲಿ ಅಥವಾ ಕೂಲಿ ಕಾರ್ಮಿಕರ ಮಕ್ಕಳಾಗಿದ್ದಲ್ಲಿ ಈ ವಿದ್ಯಾರ್ಥಿ ವೇತನಕ್ಕೆ SSP ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಈ ವಿದ್ಯಾರ್ಥಿ ವೇತನಕ್ಕೆ 01 ರಿಂದ 12ನೇ ತರಗತಿ ವಿದ್ಯಾರ್ಥಿಗಳು ಹಾಗೂ ಪದವಿ ಮತ್ತು ವೃತ್ತಿಪರ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವಂತಹ ಎಲ್ಲ ವರ್ಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಥಿ ವೇತನಕ್ಕೆ ಇರಬೇಕಾದ ಅರ್ಹತೆಗಳು:
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಕಡ್ಡಾಯವಾಗಿ ಕೂಲಿಕಾರ್ಮಿಕರ ಅಥವಾ ಕಟ್ಟಡ ಕಾರ್ಮಿಕರ ಮಕ್ಕಳಾಗಿರಬೇಕು.
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ ಎರಡು ಲಕ್ಷ ರೂಪಾಯಿ ಕೆಳಗೆ ಇರಬೇಕು.
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯ ಪೋಷಕರ ಲೇಬರ್ ಕಾರ್ಡನ್ನು ಹೊಂದಿರಬೇಕಾಗಿದೆ.
- ಈ ಲೇಬರ್ ಕಾರ್ಡ್ ವಿದ್ಯಾರ್ಥಿ ವೇತನವನ್ನು ಪಡೆಯಲು ಬಯಸುವಂತಹ ವಿದ್ಯಾರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರಬೇಕು.
ವಿದ್ಯಾರ್ಥಿ ವೇತನಕ್ಕೆ ಬೇಕಾಗುವ ದಾಖಲೆಗಳು:
- ವಿದ್ಯಾರ್ಥಿಯ ಬ್ಯಾಂಕ್ ಖಾತೆ ವಿವರಗಳು
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಪೋಷಕರ ಲೇಬರ್ ಕಾರ್ಡ್
- ವಿದ್ಯಾರ್ಥಿಯ ಪ್ರವೇಶಿ ಶುಲ್ಕ ರಸೀದಿ
- ವಿದ್ಯಾರ್ಥಿಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ವಿದ್ಯಾರ್ಥಿಯ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- ಚಾಲ್ತಿಯಲ್ಲಿರುವ ಮೊಬೈಲ್ ನಂಬರ್
- ಹಿಂದಿನ ತರಗತಿಯ ಅಂಕಪಟ್ಟಿ
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿಧಾನ:
ನೀವೇನಾದರೂ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಲ್ಲಿ ಮತ್ತು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬೇಕೆಂದು ಬಯಸಿದರೆ, ಈ ಕೆಳಗಡೆ ನೀಡಿರುವ ಜಾಲತಾಣವನ್ನು ಬಳಸಿಕೊಂಡು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅಥವಾ ನಿಮ್ಮ ಹತ್ತಿರವಿರುವ ಯಾವುದಾದರು ಆನ್ಲೈನ್ ಸೇವ ಕೇಂದ್ರಗಳಿಗೆ ಭೇಟಿ ನೀಡಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ಈಗಲೇ ಅರ್ಜಿ ಸಲ್ಲಿಸಿ: ಅಪ್ಲೈ ಮಾಡಿ!
ಮೇಲೆ ನೀಡಿರುವ ಜಾಲತಾಣ ಬಳಸಿ ಲೇಬರ್ ಕಾರ್ಡ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಅಥವಾ ಅಗತ್ಯದ ದಾಕಲೆಗಳೊಂದಿಗೆ ನಿಮ್ಮ ಹತ್ತಿರವಿರುವ ಆನ್ಲೈನ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ದಾಖಲೆಗಳ ಒದಗಿಸುವ ಮೂಲಕ ಅರ್ಜಿ ಸಲ್ಲಿಸಬಹುದು.