Free Gas Cylinder: ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್ ಪಡೆಯಬೇಕಾ? ಈಗಲೇ ಅರ್ಜಿ ಸಲ್ಲಿಸಿ!
ನಮಸ್ಕಾರ, ರಾಜ್ಯದ ಜನತೆಗೆಲ್ಲ ಈ ಲೇಖನದ ಮೂಲಕ ಎಲ್ಲ ಜನತೆಗೆ ತಿಳಿಸುವುದೇನೆಂದರೆ, ಇತ್ತೀಚಿನ ದಿನಮಾನಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿಯೂ ಕೂಡ ಗ್ಯಾಸ್ ಗ್ಯಾಸ್ ಸಿಲಿಂಡರ್ ಹಾಗೂ ಸ್ಟವ್ ಬಳಸುವವರ ಸಂಖ್ಯೆ ಹೆಚ್ಚಾಗಿದೆ ಎಂದು ಹೇಳಬಹುದು. ಇತ್ತೀಚಿನ ದಿನಮಾನಗಳಲ್ಲಿ ಕಟ್ಟಿಗೆಯನ್ನು ಬಳಸುವುದು ಕಡಿಮೆಯಾಗಿದೆ ಎಂದು ಹೇಳಬಹುದು.
ಇದೀಗ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆ 2.0 ಅಡಿಯಲ್ಲಿ ಹಲವಾರು ಜನರಿಗೆ ಉಚಿತವಾಗಿ ಗ್ಯಾಸ್ ಸಿಲಿಂಡರ್ ಹಾಗೂ ಸ್ಟವ್ ಅನ್ನು ನೀಡಲಾಗುತ್ತಿದೆ. ಯಾರೆಲ್ಲಾ ಅರ್ಜಿ ಸಲ್ಲಿಸಲು ಅರ್ಹರು ಇರುತ್ತಾರೆ? ಹಾಗೂ ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳು ಬೇಕು? ಮತ್ತು ಅರ್ಜಿ ಸಲ್ಲಿಸುವುದು ಹೇಗೆ? ಎಂಬುವುದನ್ನು ಈ ಕೆಳಗಡೆ ನೀವು ಮಾಹಿತಿಯನ್ನು ಪಡೆಯಬಹುದಾಗಿರುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಮೊಬೈಲ್ ನಂಬರ್
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- ಬಿಪಿಎಲ್ ರೇಷನ್ ಕಾರ್ಡ್
ಅರ್ಜಿ ಸಲ್ಲಿಸಲು ಅರ್ಹತೆಗಳೇನು?
- ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು 18 ವರ್ಷ ಮೇಲ್ಪಟ್ಟಿರಬೇಕು.
- ಮಹಿಳೆಯರಿಗೆ ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ.
- ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹಿಂದುಳಿದ ವರ್ಗದವರಿಗೆ ಸೇರಿದವರಾಗಿರಬೇಕು ಹಾಗೂ ಬಿಪಿಎಲ್ ರೇಷನ್ ಕಾರ್ಡನ್ನು ಹೊಂದಿರಬೇಕು.
- ಅರ್ಜಿ ಸಲ್ಲಿಸುವುದಕ್ಕಿಂತ ಮೊದಲು ಗ್ಯಾಸ್ ಕನೆಕ್ಷನ್ ಅನ್ನು ಕುಟುಂಬದಲ್ಲಿ ಹೊಂದಿರಬಾರದು.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರವಿರುವ ಗ್ಯಾಸ್ ಏಜೆನ್ಸಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ ಅಥವಾ ಈ ಕೆಳಗೆ ನೀಡಿರುವ ಜಾಲತಾಣವನ್ನು ಬಳಸಿಕೊಂಡು ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಈಗಲೇ ಅರ್ಜಿ ಸಲ್ಲಿಸಿ: ಅಪ್ಲೈ ಮಾಡಿ!