Free LPG Cylinder: ಉಚಿತ ಗ್ಯಾಸ್ ಸಿಲಿಂಡರ್ ಸಂಪರ್ಕಕ್ಕೆ ಅರ್ಜಿ ಸಲ್ಲಿಸಿ! ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ!
ನಮಸ್ಕಾರ ಎಲ್ಲರಿಗೂ, ಉಚಿತ ಗ್ಯಾಸ್ ಸಿಲೆಂಡರ್ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತವಾಗಿ ಗ್ಯಾಸ್ ಸಂಪರ್ಕವನ್ನು ಪಡೆಯಬೇಕೆಂದು ಬಯಸಿರುವಂತಹ ಅಭ್ಯರ್ಥಿಗಳಿಗೆ ಒಂದು ಸುವರ್ಣಾವಕಾಶ ಎಂದು ಹೇಳಬಹುದು. ಯಾಕೆಂದರೆ, ಪ್ರಧಾನಮಂತ್ರಿ ಉಜ್ವಲ ಯೋಜನೆ 2.0 ಯೋಜನೆಯ ಅಡಿ ಅರ್ಜಿ ಸಲ್ಲಿಸಿ ಉಚಿತ ಗ್ಯಾಸ್ ಕನೆಕ್ಷನ್ ಅನ್ನು ಪಡೆಯಬಹುದಾಗಿರುತ್ತದೆ. ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯಬೇಕೆಂದು ಬಯಸಿದರೆ ಲೇಖನವನ್ನು ಕೊನೆಯವರೆಗೂ ಓದಿ.
ಪ್ರಧಾನ ಮಂತ್ರಿ ಉಜ್ವಲ ಯೋಜನೆ 2.0:
2016ರಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಯಿತು. ನಿರಂತರವಾಗಿ ಕಟ್ಟಿಗೆಯನ್ನು ಬಳಕೆ ಮಾಡುತ್ತಿರುವ ಮಹಿಳೆಯರು ಇದೀಗ ಉಚಿತವಾಗಿ ಗ್ಯಾಸ್ ಸಂಪರ್ಕವನ್ನು ಈ ಯೋಜನೆಯ ಮೂಲಕ ಪಡೆಯುತ್ತಿದ್ದಾರೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಲಕ್ಷಾಂತರ ಮಹಿಳೆಯರು ಈ ಯೋಜನೆಯ ಲಾಭವನ್ನು ಪಡೆದುಕೊಂಡಿದ್ದಾರೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳು ಬೇಕಾಗುತ್ತವೆ? ಮತ್ತು ಯಾವೆಲ್ಲ ಅರ್ಹತೆಗಳಿರಬೇಕು? ಎಂಬ ನಿಮ್ಮ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
- ಅಭ್ಯರ್ಥಿಯ ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಪಾಸ್ಪೋರ್ಟ್ ಅಳಿತೆಯ ಭಾವಚಿತ್ರ
- ವಿಳಾಸದ ಪುರಾವೆ
- ಬ್ಯಾಂಕ್ ಪಾಸ್ ಬುಕ್ ವಿವರಗಳು
- ಚಾಲ್ತಿಯಲ್ಲಿರುವ ಮೊಬೈಲ್ ನಂಬರ್
ಅರ್ಜಿ ಸಲ್ಲಿಸಲು ಅರ್ಹತೆಗಳು:
- ಅರ್ಜಿ ಸಲ್ಲಿಸಲು ಭಾರತೀಯ ಮಹಿಳೆಯಾಗಿದ್ದರೆ ಅರ್ಹತೆಯನ್ನು ಹೊಂದಿರುತ್ತೀರಾ.
- 18 ವರ್ಷ ಮೇಲ್ಪಟ್ಟಂತಹ ಮಹಿಳೆಯರು ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
- ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.
- ಕಡ್ಡಾಯವಾಗಿ ಬಿಪಿಎಲ್ ರೇಷನ್ ಕಾರ್ಡ್ ಅಥವಾ ಅಂತ್ಯೋದಯ ರೇಷನ್ ಕಾರ್ಡನ್ನು ಹೊಂದಿರಬೇಕು.
ಅರ್ಜಿ ಸಲ್ಲಿಸುವುದು ಹೇಗೆ:
ನೀವೇನಾದರೂ ಪ್ರಧಾನಮಂತ್ರಿ ಉಜ್ವಲ ಯೋಜನೆ 2.0ಗೆ ಅರ್ಜಿ ಸಲ್ಲಿಸಿ ಉಚಿತ ಗ್ಯಾಸ್ ಸಂಪರ್ಕವನ್ನು ಪಡೆಯಬೇಕೆಂದು ಬಯಸಿದರೆ, ಈ ಕೆಳಗಡೆ ನೀಡಿರುವ ಜಾಲತಾಣವನ್ನು ಬಳಸಿಕೊಂಡು ನೀವು ನಿಮ್ಮ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅಥವಾ ನಿಮಗೆ ಅರ್ಜಿ ಸಲ್ಲಿಸಲು ತಿಳಿಯದಿದ್ದಲ್ಲಿ ನಿಮ್ಮ ಹತ್ತಿರವಿರುವ ಆನ್ಲೈನ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
Application Link | Apply Now |