PM Awas: ಮನೆ ಇಲ್ಲದವರಿಗೆ, ಮನೆ ಕಟ್ಟಿಕೊಳ್ಳಲು ಸರ್ಕಾರದಿಂದ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ!
PM Awas: ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಬಡವರು ಮತ್ತು ಹಿಂದುಳಿದ ವರ್ಗದವರು ತಮ್ಮ ಸ್ವಂತ ಮನೆಯನ್ನು ಕಟ್ಟಿಕೊಳ್ಳಬೇಕೆಂಬ ಕನಸನ್ನು ನನಸು ಮಾಡಲು ಕೇಂದ್ರ ಸರ್ಕಾರದ ವತಿಯಿಂದ ಲಭ್ಯವಿರುವ ಪ್ರಧಾನ ಮಂತ್ರಿ ಆವಾಸ್ ಯೋಜನೆ ಮೂಲಕ ಸಾಧ್ಯವಿರುತ್ತದೆ. ಯಾಕೆಂದರೆ ಈ ಯೋಜನೆಯ ಅಡಿಯಲ್ಲಿ ಮನೆ ಕಟ್ಟಿಕೊಳ್ಳಲು ಕೇಂದ್ರ ಸರ್ಕಾರದಿಂದ ಸಹಾಯಧನವನ್ನು ನೀಡಲಾಗುತ್ತದೆ.
ಪ್ರಧಾನಮಂತ್ರಿ ಆವಾಸ್ ಯೋಜನೆ: (PM Awas)
ನೀವೇನಾದರೂ ಈ ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿದರೆ, ನಿಮಗೆ ಮನೆ ಕಟ್ಟಿಕೊಳ್ಳಲು ಸರ್ಕಾರದಿಂದ ಸಹಾಯಧನವನ್ನು ನೀಡಲಾಗುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾರು ಅರ್ಹರಾಗಿರುತ್ತಾರೆ? ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಮತ್ತು ಈ ಯೋಜನೆಯ ಬಗ್ಗೆ ಇನ್ನಷ್ಟು ಹೆಚ್ಚಿನ ವಿವರಗಳನ್ನು ಈ ಲೇಖನದಲ್ಲಿ ನೀವು ಪಡೆಯಬಹುದಾಗಿರುತ್ತದೆ.
ಅರ್ಜಿ ಸಲ್ಲಿಸಲು ಅರ್ಹತೆಗಳು:
ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂಪಾಯಿಯನ್ನು ಮೀರಿರಬಾರದು ಎಂದು ತಿಳಿಸಲಾಗಿದೆ. ನೀವೇನಾದರೂ ಮಧ್ಯಮ ವರ್ಗದವರಾಗಿದ್ದರೆ ಕುಟುಂಬದ ವಾರ್ಷಿಕ ಆದಾಯ 6 ಲಕ್ಷ ರೂಪಾಯಿಯನ್ನು ಮೀರಿರಬಾರದು.
ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ ಮನೆ ಕಟ್ಟಿಕೊಳ್ಳಲು ಸಹಾಯಧನವನ್ನು ಪಡೆಯಲು ಬಯಸಿದರೆ 18 ವರ್ಷ ಮೇಲ್ಪಟ್ಟಿರಬೇಕು ಹಾಗೂ 59 ವರ್ಷ ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಮೀರಿರಬಾರದು ಎಂದು ತಿಳಿಸಲಾಗಿದೆ.
ಈ ಯೋಜನೆಗೆ ಅರ್ಜಿ ಸಲ್ಲಿಸಿದಲ್ಲಿ ಮಹಿಳೆಯರು ಅಂದ್ರೆ ವಿಶೇಷವಾಗಿ ವಿಚ್ಛೇದನ ಪಡೆದಿರುವ ಮಹಿಳೆಯರು, ವಿಧವೆಯರು, ಅಂಗವಿಕಲರಿಗೆ ಮತ್ತು ಹಿರಿಯ ನಾಗರಿಕರಿಗೆ ಈ ಯೋಜನೆಯ ಅಡಿಯಲ್ಲಿ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ ಎಂದು ತಿಳಿದು ಬಂದಿರುತ್ತದೆ.
ಈ ಯೋಜನೆಯ ಪ್ರಯೋಜನ:
ನೀವೇನಾದರೂ ಈ ಯೋಜನೆಗೆ ಅರ್ಜಿ ಸಲ್ಲಿಸಿ ಆಯ್ಕೆಯದಲ್ಲಿ ನಿಮಗೆ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ₹2,67,000 ರೂಪಾಯಿವರೆಗೆ ಆರ್ಥಿಕ ಧನ ಸಹಾಯವನ್ನು ನೀಡಲಾಗುತ್ತದೆ. ಈ ಯೋಜನೆಯ ಅಡಿಯಲ್ಲಿ ನಗರ ಪಟ್ಟಿ ಹಾಗೂ ಗ್ರಾಮೀಣ ಪಟ್ಟಿ ಎಂಬ ಎರಡು ವರ್ಗಗಳು ಇರುತ್ತವೆ ಎಂಬುವುದನ್ನು ಮರೆಯಬೇಡಿ. ಹಾಗೂ 10 ಲಕ್ಷ ರೂಪಾಯಿಗಳವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಕೂಡ ಒದಗಿಸಿಕೊಡಲಾಗುತ್ತದೆ ಎಂಬ ಮಾಹಿತಿ ತಿಳಿದು ಬಂದಿರುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
- ಅರ್ಚಿದಾರರ ಆಧಾರ್ ಕಾರ್ಡ್
- ಅಭ್ಯರ್ಥಿಯ ಪಾನ್ ಕಾರ್ಡ್
- ರೇಷನ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಅಭ್ಯರ್ಥಿಯ ಮೊಬೈಲ್ ನಂಬರ್
ಅರ್ಜಿ ಸಲ್ಲಿಸುವುದು ಹೇಗೆ?
ನೀವೇನಾದರೂ ಈ ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದರೆ ಮತ್ತು ಆಸಕ್ತಿ ಇದ್ದರೆ ಈ ಕೆಳಗಡೆ ನೀಡಿರುವ ಜಾಲತಾಣವನ್ನು ಬಳಸಿಕೊಂಡು ಈ ಯೋಜನೆಗೆ ಅರ್ಜಿ ಸಲ್ಲಿಸಿ, ಮನೆ ಕಟ್ಟಿಕೊಳ್ಳಲು ಸರ್ಕಾರದಿಂದ ಸಹಾಯಧನವನ್ನು ಪಡೆಯಬಹುದಾಗಿರುತ್ತದೆ.
Application Link | Apply Now |