Ration Card Correction: ರೇಷನ್ ಕಾರ್ಡ್ ತಿದ್ದುಪಡಿ ಆರಂಭ! ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ!
ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ರಾಜ್ಯದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ರೇಷನ್ ಕಾರ್ಡ್ ನಲ್ಲಿ ಬದಲಾವಣೆಗಳನ್ನು ಮಾಡಿಸಿಕೊಳ್ಳಲು ಕಾದು ಕುಳಿತಿರುವಂತಹ ಜನರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಗುಡ್ ನ್ಯೂಸ್ ಅನ್ನು ನೀಡಿರುತ್ತದೆ. ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶವನ್ನು ಕೊಡಲಾಗಿದ್ದು ಬಹಳಷ್ಟು ಜನರ ಮನದಲ್ಲಿ ಸಂತಸವನ್ನು ಮೂಡಿಸಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ.
ರೇಷನ್ ಕಾರ್ಡ್ ತಿದ್ದುಪಡಿ ಆರಂಭ:
ಹೌದು ಸ್ನೇಹಿತರೆ, ರೇಷನ್ ಕಾರ್ಡ್ ನಲ್ಲಿ ಬದಲಾವಣೆಗಳನ್ನು ಮಾಡಿಸಿಕೊಳ್ಳುವವರಿಗೆ ಸಿಹಿ ಸುದ್ದಿ ಎಂದೆ ಹೇಳಬಹುದು. ಏಕೆಂದರೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶವನ್ನು ನೀಡಲಾಗಿದೆ. ರೇಷನ್ ಕಾರ್ಡ್ ನಲ್ಲಿ ಯಾವೆಲ್ಲಾ ಬದಲಾವಣೆಗಳನ್ನು ಮಾಡಿಸಬಹುದು? ಹಾಗೂ ಯಾವ ಜಿಲ್ಲೆಗಳಿಗೆ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶವನ್ನು ನೀಡಲಾಗಿದೆ ಎಂಬುವುದನ್ನು ಈ ಕೆಳಗಿನ ನೀಡಲಾಗಿದೆ.
ನೀವು ರೇಷನ್ ಕಾರ್ಡ್ ನಲ್ಲಿ ಯಾವುದೇ ರೀತಿಯ ಬದಲಾವಣೆಗಳನ್ನು ಈ ಸಮಯದಲ್ಲಿ ಮಾಡಿಕೊಳ್ಳಬಹುದಾಗಿರುತ್ತದೆ. ಉದಾಹರಣೆಗೆ, ಕುಟುಂಬದ ಸದಸ್ಯರ ಸೇರ್ಪಡೆ, ಕುಟುಂಬದಲ್ಲಿರುವ ಸದಸ್ಯರ ಹೆಸರುಗಳನ್ನು ತಿದ್ದುಪಡಿ ಮಾಡುವುದು, ಸದಸ್ಯರನ್ನು ರೇಷನ್ ಕಾರ್ಡ್ ಇಂದ ತೆಗೆದುಹಾಕುವುದು, ಕುಟುಂಬದ ಮುಖ್ಯಸ್ಥರ ಬದಲಾವಣೆ ಹಾಗೂ ಇನ್ನಿತರ ಸೇವೆಗಳನ್ನು ನೀವು ಇದೀಗ ಪಡೆಯಬಹುದಾಗಿರುತ್ತದೆ.
ಮೇಲೆ ನೀಡಿರುವ ಸೇವೆಗಳನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತಿದ್ದುಪಡಿ ಮಾಡಿಸಿಕೊಳ್ಳಲು ಅವಕಾಶವನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ನೀಡಿರುತ್ತದೆ. ನಿಮ್ಮ ಹತ್ತಿರವಿರುವ ಸೇವ ಕೇಂದ್ರಗಳಿಗೆ ಭೇಟಿ ನೀಡಿ ಈ ಕೂಡಲೇ ನೀವು ರೇಷನ್ ಕಾರ್ಡ್ ನಲ್ಲಿ ಯಾವುದೇ ರೀತಿಯ ಬದಲಾವಣೆಗಳನ್ನು ಮಾಡಿಸಿಕೊಳ್ಳಬಹುದಾಗಿರುತ್ತದೆ.
ಸ್ನೇಹಿತರೆ, ನೀವು ಇವತ್ತಿನಿಂದ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ಗಂಟೆಯವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಬಹುದಾಗಿರುತ್ತದೆ. ಈ ಸೇವೆಯು ಯಾವಾಗ ಸ್ಥಗಿತಗೊಳ್ಳುತ್ತದೆ ಎಂಬುದನ್ನು ಈವರಿಗೆ ತಿಳಿಸಲಾಗಿಲ್ಲ. ಹಾಗಾಗಿ ಅವಕಾಶವನ್ನು ಅವಶ್ಯಕತೆ ಇರುವಂತಹ ಜನರು ಸದುಪಯೋಗಪಡಿಸಿಕೊಳ್ಳಬಹುದಾಗಿರುತ್ತದೆ.