SBIF Asha Scholarship: 6 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ 15,000 ಸ್ಕಾಲರ್ಶಿಪ್! ಈಗಲೇ ಅರ್ಜಿ ಸಲ್ಲಿಸಿ!
ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ತಮಗೆ ತಿಳಿಸುವುದೇನೆಂದರೆ, 6 ರಿಂದ 12ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ SBI ಸಂಸ್ಥೆಯ ವತಿಯಿಂದ ಸ್ಕಾಲರ್ಶಿಪ್ ಅನ್ನು ನೀಡಲಾಗುತ್ತಿದ್ದು, ಅರ್ಹತೆ ಮತ್ತು ಆಸಕ್ತಿ ಇರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಸಂಪೂರ್ಣ ಮಾಹಿತಿ ಬೇಕಿದ್ದವರು ಲೇಖನವನ್ನು ಕೊನೆಯವರೆಗೂ ಓದಿ.
SBIF Asha Scholarship 2024:
ನೀವೇನಾದರೂ ಈ SBI ಆಶಾ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ಬಯಸಿದರೆ, ಯಾವೆಲ್ಲ ಅರ್ಹತೆಗಳನ್ನು ಹೊಂದಿರಬೇಕು? ಹಾಗೂ ಯಾವೆಲ್ಲಾ ದಾಖಲೆಗಳನ್ನು ಅರ್ಜಿ ಸಲ್ಲಿಸುವ ಸಮಯದಲ್ಲಿ ಒದಗಿಸಬೇಕು? ಎಂಬ ಎಲ್ಲ ಪ್ರಶ್ನೆಗಳಿಗೆ ಈ ಲೇಖನದಲ್ಲಿ ಉತ್ತರಿಸಲಾಗಿದೆ ಆದಕಾರಣ ಲೇಖನವನ್ನು ಕೊನೆಯವರೆಗೂ ಓದಿ.
ಅರ್ಜಿ ಸಲ್ಲಿಸಲು ಅರ್ಹತೆಗಳು:
- ಈ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ ಒಂದು ಲಕ್ಷಕ್ಕಿಂತ ಕಡಿಮೆ ಇರಬೇಕು.
- 6 ರಿಂದ 12ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
- ಪದವಿ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಕೂಡ ಅರ್ಜಿ ಹಾಕಬಹುದಾಗಿದೆ.
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಹಿಂದಿನ ವರ್ಷದ ಪರೀಕ್ಷೆಯಲ್ಲಿ ಕನಿಷ್ಠ 75% ಅಂಕಗಳನ್ನು ಪಡೆದು ಪಾಸ್ ಆಗಿರಬೇಕು.
ಬೇಕಾಗುವ ದಾಖಲೆಗಳು:
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಹಿಂದಿನ ವರ್ಷದ ಅಂಕಪಟ್ಟಿ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಪಾಸ್ ಬುಕ್ ವಿವರಗಳು
- ಶಾಲಾ ಅಥವಾ ಕಾಲೇಜು ಪ್ರವೇಶ ಪ್ರಮಾಣ ಪತ್ರ
ಅರ್ಜಿ ಸಲ್ಲಿಸುವುದು ಹೇಗೆ?
ನೀವೇನಾದರೂ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸಿದರೆ ಮೇಲೆ ನೀಡಿರುವ ಅರ್ಹತೆಗಳನ್ನು ಪೂರೈಸಿರಬೇಕಾಗುತ್ತದೆ ಹಾಗೂ ಈ ಕೆಳಗಡೆ ನೀಡಿರುವಂತಹ ಜಾಲತಾಣವನ್ನು ಬಳಸಿಕೊಂಡು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಯಾವೆಲ್ಲ ದಾಖಲೆಗಳು ಬೇಕಾಗುತ್ತವೆ ಎಂಬುದನ್ನು ಈ ಮೇಲೆ ನೀಡಲಾಗಿದೆ.
ಈಗಲೇ ಅರ್ಜಿ ಸಲ್ಲಿಸಿ: ಅಪ್ಲೈ ಮಾಡಿ!
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಮೇಲೆ ನೀಡಿರುವ ಜಾಲತಾಣವನ್ನು ಬಳಸಿ ಹಾಗೂ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ 6 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ 15000, ಪದವಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ 50,000, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ 70,000, ಐಟಿಐ ವಿದ್ಯಾರ್ಥಿಗಳಿಗೆ 2 ಲಕ್ಷದವರೆಗೆ ಮತ್ತು ಐಐಎಂ ವಿದ್ಯಾರ್ಥಿಗಳಿಗೆ 7,50,000 ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.