Scholarship: ವಿದ್ಯಾರ್ಥಿಗಳಿಗೆ 25,000 ವಿದ್ಯಾರ್ಥಿ ವೇತನ! ಈಗಲೇ ಅರ್ಜಿ ಸಲ್ಲಿಸಿ!
ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ರಾಜ್ಯದ ಸಮಸ್ತ ಜನತೆಗೆ ತಿಳಿಸುವುದೇನೆಂದರೆ, ಇಂತಹ ವಿದ್ಯಾರ್ಥಿಗಳಿಗೆ 25,000 ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದ್ದು, ಅರ್ಹತೆ ಇರುವಂತಹ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಆದಕಾರಣ ಸಂಪೂರ್ಣವಾದ ಮಾಹಿತಿ ಪಡೆಯಲು ಲೇಖನವನ್ನು ಕೊನೆಯವರೆಗೂ ಓದಿ.
ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಪ್ರೋತ್ಸಾಹ ಧನ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಇದರ ಕುರಿತಾಗಿ ಸಂಪೂರ್ಣವಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿರುತ್ತದೆ ನೋಡಿ.
ಅರ್ಜಿ ಸಲ್ಲಿಸಲು ಅರ್ಹತೆಗಳೇನು?
ನೀವೇನಾದರೂ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸಿದರೆ 2024-25 ನೇ ಸಾಲಿನಲ್ಲಿ ಬಿ.ಎಡ್ ವ್ಯಾಸಂಗ ಮಾಡುತ್ತಿರುವಂತಹ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳ ಆಗಿರಬೇಕು.
ಈ ವಿದ್ಯಾರ್ಥಿ ವೇತನಕ್ಕೆ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ ಹಾಗೂ ಪಾರ್ಸಿ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ ಎಂದು ತಿಳಿಸಲಾಗಿದೆ.
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದಿರುವಂತಹ ಸರ್ಕಾರಿ ಅಥವಾ ಅರೆ ಸರ್ಕಾರಿ ಹಾಗೂ ಅನುದಾನಿತ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿಯನ್ನು ಪಡೆದು ಬಿ.ಎಡ್ ವ್ಯಾಸಂಗವನ್ನು ಮಾಡುತ್ತಿರಬೇಕು ಎಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಪಾಸ್ಪೋರ್ಟ್ ಅಳತೆಯ ಭಾವಚಿತ್ರ
- ಮೊಬೈಲ್ ನಂಬರ್
- ಕಾಲೇಜು ದಾಖಲಾತಿ ಪ್ರಮಾಣ ಪತ್ರ
- ಬ್ಯಾಂಕ್ ಪಾಸ್ ಬುಕ್ ವಿವರಗಳು
ಅರ್ಜಿ ಸಲ್ಲಿಸುವುದು ಹೇಗೆ?
ಸ್ನೇಹಿತರೆ, ನೀವೇನಾದರೂ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದರೆ ಕೊನೆಯ ದಿನಾಂಕ ಮುಗಿಯುವುದರ ಒಳಗಾಗಿ ಆನ್ಲೈನ್ ಮೂಲಕ ಅಂದರೆ ಸೇವಾಸಿಂದು ಜಾಲತಾಣವನ್ನು ಬಳಸಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಪ್ರಯೋಜನವನ್ನು ಪಡೆಯಬಹುದಾಗಿರುತ್ತದೆ. ಈ ವಿದ್ಯಾರ್ಥಿ ವೇತನಕ್ಕೆ ಇದೇ ತಿಂಗಳು ಅಂದರೆ, ಡಿಸೆಂಬರ್ 25ನೇ ತಾರೀಕು 2024 ಕೊನೆಯ ದಿನಾಂಕವಾಗಿರುತ್ತದೆ.
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಸೇವಾ ಸಿಂಧು ಪೋರ್ಟಲ್ ಗೆ ಲಾಗಿನ್ ಆಗಿ ನಂತರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಎಂಬ ಆಯ್ಕೆಯನ್ನು ಪಡೆದುಕೊಂಡು, ಪ್ರೋತ್ಸಾಹ ಧನ ಯೋಜನೆಯನ್ನು ಆಯ್ಕೆ ಮಾಡಿಕೊಂಡು, ಈ ವಿದ್ಯಾರ್ಥಿ ವೇತನಕ್ಕೆ ಸರಿಯಾದ ದಾಖಲೆಗಳನ್ನು ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.