Tata Capital Scholarship: ಪಿಯುಸಿ ವಿದ್ಯಾರ್ಥಿಗಳಿಗೆ 12,000 ವಿದ್ಯಾರ್ಥಿ ವೇತನ.! ಈಗಲೇ ಅರ್ಜಿ ಸಲ್ಲಿಸಿ.!
ನಮಸ್ಕಾರ ಎಲ್ಲರಿಗೂ ಈ ಲೇಖನದ ಮೂಲಕ ನಾಡಿನ ಸಮಸ್ತ ಜನತೆಗೆ ತಿಳಿಸುವುದೇನೆಂದರೆ, ಟಾಟಾ ಪಂಕ್ ಸ್ಕಾಲರ್ಶಿಪ್ ಯೋಜನೆಯ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದ್ದು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವೆಲ್ಲ ಅರ್ಹತೆಗಳಿರಬೇಕು ಮತ್ತು ಅವೆಲ್ಲ ದಾಖಲೆಗಳು ಬೇಕು ಎಂಬ ಮಾಹಿತಿಯನ್ನು ತಿಳಿಸಿಕೊಡಲಾಗಿದೆ ಲೇಖನವನ್ನು ಕೊನೆಯವರೆಗೂ ಓದಿ ಸಂಪೂರ್ಣವಾದ ಮಾಹಿತಿ ದೊರಕುತ್ತದೆ.
ಟಾಟಾ ಕ್ಯಾಪಿಟಲ್ ಸ್ಕಾಲರ್ಶಿಪ್ – Tata Capital Scholarship
ಈ ವಿದ್ಯಾರ್ಥಿ ವೇತನವನ್ನು ಟಾಟಾ ಕ್ಯಾಪಿಟಲ್ ಪಂಕ್ ಸ್ಕಾಲರ್ಶಿಪ್ ಎಂದು ಕೂಡ ಕರೆಯಲಾಗುತ್ತದೆ ಈ ವಿದ್ಯಾರ್ಥಿ ವೇತನವು ಟಾಟಾ ಕ್ಯಾಪಿಟಲ್ ಲಿಮಿಟೆಡ್ ಒಂದು ಉಪಕ್ರಮವಾಗಿದೆ, ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದಿರುವಂತಹ ಹಾಗೂ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಸೇರಿರುವ ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣ ಮುಂದುವರೆಸಲು ಆರ್ಥಿಕ ನೆರವನ್ನು ಈ ವಿದ್ಯಾರ್ಥಿ ವೇತನದ ಅಡಿಯಲ್ಲಿ ನೀಡಲಾಗುತ್ತದೆ.
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವಂತಹ 11 ಮತ್ತು 12ನೇ ತರಗತಿ ವಿದ್ಯಾರ್ಥಿಗಳು ಹಾಗೂ ಸಾಮಾನ್ಯ ಪದವಿ ಡಿಪ್ಲೋಮಾ ಪಾಲಿಟೆಕ್ನಿಕ್ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವಂತಹ ವಿದ್ಯಾರ್ಥಿಗಳು 10,000 ದಿಂದ 12 ಸಾವಿರದವರೆಗೆ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳುತ್ತಾರೆ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಹಿಂದಿನ ತರಗತಿಯಲ್ಲಿ ವಿದ್ಯಾರ್ಥಿಯು ಕನಿಷ್ಠ 60% ಅಂಕಗಳನ್ನು ಗಳಿಸಿ ಪಾಸ್ ಆಗಿರಬೇಕು.
- ವಿದ್ಯಾರ್ಥಿಯ ವರ್ಷದ ಕುಟುಂಬದ ಆದಾಯ 2.5 ಲಕ್ಷಕ್ಕಿಂತ ಕಡಿಮೆ ಇರಬೇಕು
- ಭಾರತದ ಕಾಯಂ ನಿವಾಸಿಯಾಗಿರುವಂತಹ ವಿದ್ಯಾರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.
- ಈ ವಿದ್ಯಾರ್ಥಿ ವೇತನಕ್ಕೆ ಭಾರತದ ಮಾನ್ಯತೆ ಪಡೆದಿರುವಂತಹ ಯಾವುದೇ ಶಿಕ್ಷಣ ಸಂಸ್ಥೆಯಿಂದ 12 ಅಥವಾ 11ನೇ ತರಗತಿ ಓದುತ್ತಿರುವ ವಿದ್ಯಾರ್ಥಿ ಆಗಿರಬೇಕು.
ಬೇಕಾಗುವ ದಾಖಲೆಗಳು:
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- ಕಾಲೇಜಿನ ಗುರುತಿನ ಚೀಟಿ
- ಆದಾಯ ಪ್ರಮಾಣ ಪತ್ರ
- ಶುಲ್ಕ ತುಂಬಿದ ರಶೀದಿ
- ಹಿಂದಿನ ವರ್ಷದ ಅಂಕಪಟ್ಟಿ
- ಇನ್ನಿತರ ದಾಖಲೆಗಳು
ಅರ್ಜಿ ಸಲ್ಲಿಸುವುದು ಹೇಗೆ?
ನೀವೇನಾದರೂ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬೇಕೆಂದು ಬಯಸಿದರೆ ಈ ಕೆಳಗೆ ನೀಡಿರುವ ಜಾಲತಾಣವನ್ನು ಬಳಸಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-2-2025 ಆಗಿರುತ್ತದೆ.
https://buddy4study.com/page/the-tata-capital-pankh-scholarship-programme